ಕುಂದಾಪುರ, ಸೆ. 03 (DaijiworldNews/SM): ಇಲ್ಲಿನ ಕೋಟತಟ್ಟು ಪಡುಕೆರೆಯಿಂದ ಕೋಡಿ ಕನ್ಯಾಣದವರೆಗೆ ಹದಗೆಟ್ಟ ರಸ್ತೆ ದುರಸ್ಥಿಗೆ ಒತ್ತಾಯಿಸಿ ಸ್ಥಳೀಯರು ಬೃಹತ್ ಪ್ರತಿಭಟನೆ ನಡೆಸಿದ್ದು, ರಸ್ತೆ ಅಭಿವೃಧಿಯಾಗದಿದ್ದಲ್ಲಿ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.




















ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸ್ಥಳಿಯರಾದ ಸೋಮಶೇಖರ್, ಇಲ್ಲಿನ ರಸ್ತೆ ಹದಗೆಟ್ಟ ಬಗ್ಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಅಭಿವೃದ್ಧಿಪಡಿಸಿಲ್ಲ. ಆ ಕಾರಣಕ್ಕಾಗಿ ರಸ್ತೆಯನ್ನು ತಡೆದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಇನ್ನು ಇದೇ ಸಂದರ್ಭದಲ್ಲಿ ಘಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಕಿರಣ್ ಗೊರಯ್ಯರವರಿಗೆ ಸ್ಥಳೀಯರು ರಸ್ತೆಯನ್ನು ಸರಿಪಡಿಸುವಂತೆ ಮನವಿ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ಥಳಿಯರಾದ ವಿವೇಕ್ ಸುವರ್ಣ, ಕೋಟತಟ್ಟು ಪಡುಕೆರೆಯಿಂದ ರಸ್ತೆ ತೀರಾ ಹದಗೆಟ್ಟಿದೆ. ಇದರ ಪರಿಣಾಮವಾಗಿ ಇದೀಗ ಪ್ರತಿಭಟನೆಯನ್ನು ಮಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆಯನ್ನು ಸರಿಪಡಿಸದಿದ್ದಲ್ಲಿ ವಾಹನ ಚಾಲಕರಿಗೆ ಸಾವು ನೋವು ಎದುರಾಗುವ ಸಂಭವವಿರುವುದರಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ತಹಶೀಲ್ದಾರ್ ರಿಗೆ ಮನವಿಯನ್ನು ಮಾಡಿದ್ದೇವೆ. ಸರಿಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ಗಳಲ್ಲಿ ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.