ಕಾಸರಗೋಡು, ಸೆ. 04 (DaijiworldNews/SM): ಜಿಲ್ಲೆಯಲ್ಲಿ ಶುಕ್ರವಾರದಂದು ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಒಂದೇ ದಿನ 236 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸಂಪರ್ಕದಿಂದ 225 ಮಂದಿಗೆ ಸೋಂಕು ತಗುಲಿದೆ. ಐವರು ವಿದೇಶ ಹಾಗೂ ಆರು ಮಂದಿ ಹೊರರಾಜ್ಯಗಳಿಂದ ಬಂದವರಾಗಿದ್ದಾರೆ.

ಈ ನಡುವೆ ಶುಕ್ರವಾರದಂದು 70 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇಂದು ೨೩೬ ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಎರಡನೇ ಬಾರಿ ಸೋಂಕಿತರ ಸಂಖ್ಯೆ 200ರ ಗಡಿದಾಟಿದಂತಾಗಿದೆ.
ಇನ್ನು 5614 ಮಂದಿಗೆ ಇದುವರೆಗೆ ಜಿಲ್ಲೆಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ 4,114 ಮಂದಿ ಗುಣಮುಖರಾಗಿದ್ದಾರೆ. 1458 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 42 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 6,058 ಮಂದಿ ಪ್ರಸ್ತುತ ನಿಗಾದಲ್ಲಿದ್ದಾರೆ.