ಕಾಸರಗೋಡು, ಸೆ 05 (DaijiworldNews/PY): ಜಿಲ್ಲೆಯಲ್ಲಿ ಶನಿವಾರ 276 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 254 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ವಿದೇಶದಿಂದ ಬಂದ ಐವರು ಹಾಗೂ 17 ಮಂದಿ ಹೊರ ರಾಜ್ಯಗಳಿಂದ ಬಂದವರಾಗಿದ್ದಾರೆ.

ಈ ನಡುವೆ ಶನಿವಾರ 83 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಶನಿವಾರ ಗರಿಷ್ಟ ಸಂಖ್ಯೆಯ ಸೋಂಕು ದೃಢಪಟ್ಟಿದೆ.
ಇನ್ನು ಜಿಲ್ಲೆಯಲ್ಲಿ ಒಟ್ಟು 5890 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ 4197 ಮಂದಿ ಗುಣಮುಖರಾಗಿದ್ದಾರೆ. 1651 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.