ಮಂಗಳೂರು, ಸೆ 05 (DaijiworldNews/PY): ದ.ಕ. ಜಿಲ್ಲೆಯಲ್ಲಿ ಶನಿವಾರ 377 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,600ಕ್ಕೆ ಏರಿಕೆಯಾಗಿದೆ.

ಈ ನಡುವೆ ಶನಿವಾರದಂದು 311 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈ ಮೂಲಕ ಒಟ್ಟು 11239 ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,961 ಸಕ್ರಿಯ ಪ್ರಕರಣಗಳಿವೆ. ಶನಿವಾರ 9 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 400ಕ್ಕೆ ಏರಿಕೆಯಾಗಿದೆ.
ಇಂದು 50 ಮಂದಿಯಲ್ಲಿ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 178 ಮಂದಿಯಲ್ಲಿ ಐಎಲ್ಐ ಪ್ರಕರಣ ಪತ್ತೆಯಾಗಿದೆ. 19 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 120 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ. ಇಂದು ಮಂಗಳೂರಿನ 192, ಪುತ್ತೂರಿನ 64, ಬಂಟ್ವಾಳದ 45, ಸುಳ್ಯದ 37, ಬೆಳ್ತಂಗಡಿಯ 20 ಹಾಗೂ ಹೊರ ಜಿಲ್ಲೆಯ 19 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.