ಮಂಗಳೂರು, ಸೆ. 06 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ರವಿವಾರದಂದು ಮತ್ತೆ 326 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14926ಕ್ಕೆ ಏರಿಕೆಯಾಗಿದೆ.

ಇಂದು ಸಂಪರ್ಕದಿಂದ 34 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 168 ಐ ಎಲ್ ಐ ಪ್ರಕರಣಗಳಾಗಿದ್ದು, 15 ಸಾರಿ ಪ್ರಕರಣಗಳಾಗಿವೆ. 109 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ರವಿವಾರ ದ.ಕ. ಜಿಲ್ಲೆಯ ಕೊರೋನಾ ವರದಿ:
ಜಿಲ್ಲೆಯಲ್ಲಿ ರವಿವಾರದಂದು 202 ಮಂದಿ ಗುಣಮುಖ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರು 11441 ಮಂದಿ
ಸದ್ಯ ಜಿಲ್ಲೆಯಲ್ಲಿ ಚಿಕಿತ್ಸೆಯಲ್ಲಿರುವವರು 3084 ಮಂದಿ
ರವಿವಾರ ಜಿಲ್ಲೆಯಲ್ಲಿ ಒಬ್ಬರು ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 401ಕ್ಕೆ ಏರಿಕೆ
ಜಿಲ್ಲೆಯಲ್ಲಿ ಇಲ್ಲಿಯ ತನಕ ಪರೀಕ್ಷೆಗೊಳಪಟ್ಟವರು 106431
ಇಲ್ಲಿಯ ತನಕ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು 91505
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ-14926