ಬಂಟ್ವಾಳ, ಸೆ. 06 (DaijiworldNews/SM): ಇಲ್ಲಿನ ಕಂದಾಯ ಇಲಾಖೆಯಲ್ಲಿ ಉಪತಹಶೀಲ್ದಾರ್ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುತ್ತೂರು ಕೋಡಿಜಾಲ ತೆಂಕಿಲ ನಿವಾಸಿ ಶ್ರೀಧರ್ (48) ಅವರು ಅಸೌಖ್ಯದಿಂದ ರವಿವಾರ ಬೆಳಿಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಶ್ರೀಧರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗದೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಶನಿವಾರ ರಾತ್ರಿ ಇವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಅವರು ಕೋವಿಡ್ ನ ನಿರ್ವಹಣೆಯ ತಂಡದಲ್ಲಿ ವಿಶೇಷವಾಗಿ ಕೆಲಸ ನಿರ್ವಹಿಸಿದ್ದರು. ಶ್ರೀಧರ್ ಅವರ ಅಕಾಲಿಕ ಸಾವಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಂತಾಪ ಸೂಚಿಸಿದ್ದು ಅವರ ಕುಟುಂಬಕ್ಕೆ ದುಖಃ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.