ಮಂಗಳೂರು, ಸೆ 07 (DaijiworldNews/PY): ಡ್ರಗ್ ಮಾಫಿಯ ವಿರುದ್ದ ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್ ಗಾಂಜಾ ಸಾಗಾಟ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರಿನ ಪೊಲೀಸ್ ಕವಾಯತು ಮೈದಾನಲ್ಲಿ ಪರೇಡ್ ನಡೆಸುತ್ತಿರುವ ಪೊಲೀಸರು, ನೂರಕ್ಕೂ ಹೆಚ್ಚು ಆರೋಪಿಗಳ ವಿಚಾರಣೆ ನಡೆಸಿದ್ದು, ಈ ವಿಚಾರಣೆಯಲ್ಲಿ ಮಂಗಳೂರು ಹಾಗೂ ಕಾಸರಗೋಡು ಮೂಲದ ಆರೋಪಿಗಳು ಭಾಗಿಯಾಗಿದ್ದಾರೆ.
ಡ್ರಗ್ ದಂಧೆಯ ಕುರಿತಂತೆ ಕಮೀಷನರ್ ಪ್ರತಿಯೋರ್ವರ ವಿಚಾರಣೆ ನಡೆಸುತ್ತಿದ್ದಾರೆ. ಈ ವಿಚಾರಣೆಯಲ್ಲಿ ಮಂಗಳೂರು ಪೊಲೀಸ್ ಕಮೀಷನೇಟರ್ ವ್ಯಾಪ್ತಿಯ ಆರೋಪಿಗಳು ಭಾಗಿಯಾಗಿದ್ದಾರೆ.
ಇದಾದ ಬಳಿಕ ಪೊಲೀಸರು ಸಂಜೆ ಗಾಂಜಾ ವ್ಯಸನಿಗಳ ಪರೇಡ್ ನಡೆಸಲಿದ್ದು, ಡ್ರಗ್ ಮಾಫಿಯಾದಲ್ಲಿ ತೊಡಗಿಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.