ಮಂಗಳೂರು, ಸೆ 07 (DaijiworldNews/PY): ದ.ಕ ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಹಾಗೂ ಕೊರೊನಾ ನಿರ್ವಹಣೆಯಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರದ ವೈಫಲ್ಯದ ವಿರುದ್ದ ಹಾಗೂ ಆರೋಗ್ಯ ಸಚಿವರ ರಾಜೀನಾಮೆಗೆ ಒತ್ತಾಯಿಸಿ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ವೆನ್ಲಾಕ್ ಆಸ್ಪತ್ರೆಯ ಮುಂದೆ ಸೋಮವಾರ ಪ್ರತಿಭಟನೆ ನಡೆಯಿತು.




ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೊ ಅವರು, ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ಕೊರೊನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಸ್ಥಳೀಯ ಶಾಸಕರು ಹಾಗೂ ಸಂಸದರ ವೈಫಲ್ಯದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇದಕ್ಕೆ ರಾಜ್ಯ ಹಾಗೂ ಕೇಂದ್ರ ಸರಕಾರ ನೇರ ಹೊಣೆ ಎಂದು ಹೇಳಿದರು
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮೊಯ್ದಿನ್ ಬಾವಾ, ಪಕ್ಷದ ಮುಖಂಡ ಇಬ್ರಾಹಿಂ ಕೋಡಿಜಾಲ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.