ಕಾಸರಗೋಡು, ಸೆ. 07 (DaijiworldNews/SM):ಜಿಲ್ಲೆಯಲ್ಲಿ ಸೋಮವಾರ 134 ಮಂದಿಗೆ ಕೊರೋನಾ ಪಾಸಿಟಿವ್ ದ್ರಢಪಟ್ಟಿದೆ. ಹತ್ತು ಆರೋಗ್ಯ ಸಿಬ್ಬಂದಿಗಳಿಗೂ ಸೋಂಕು ತಗಲಿದೆ. 111 ಮಂದಿಗೆ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ.

ಇನ್ನು ವಿದೇಶದಿಂದ ಬಂದ 18 , ಹೊರರಾಜ್ಯಗಳಿಂದ ಬಂದ ಐವರಿಗೆ ಸೋಂಕು ಪತ್ತೆಯಾಗಿದೆ. ಈ ನಡುವೆ 97 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.
ಈ ನಡುವೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಆರು ಸಾವಿರ ಗಡಿದಾಟಿದ್ದು, 6242 ಮಂದಿಗೆ ಇದುವರೆಗೆ ಸೋಂಕು ದೃಢಪಟ್ಟಂತಾಗಿದೆ. ಈ ಪೈಕಿ 604 ಮಂದಿ ವಿದೇಶ, 442 ಮಂದಿ ಹೊರರಾಜ್ಯಗಳಿಂದ ಬಂದವರಾಗಿದ್ದಾರೆ. 5196 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ.
ಜಿಲ್ಲೆಯಲ್ಲಿ ಒಟ್ಟು 4406 ಮಂದಿ ಗುಣಮುಖರಾಗಿದ್ದಾರೆ. 45 ಮಂದಿ ಇದುವರೆಗೆ ಮೃತಪಟ್ಟಿದ್ದು, 1791 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 6004 ಮಂದಿ ನಿಗಾದಲ್ಲಿದ್ದು, 1207 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.