ಕಾಸರಗೋಡು, ಸೆ. 08 (DaijiworldNews/MB) : ಮಂಗಳೂರಿನಿಂದ ಕೋಜಿಕ್ಕೋಡ್ ಗೆ ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ರಸ್ತೆ ಬದಿ ಉರುಳಿದ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಬೇವಿಂಜೆಯಲ್ಲಿ ನಡೆದಿದೆ.



ಅನಿಲ ಸೋರಿಕೆ ಉಂಟಾದ ಹಿನ್ನಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಪೊಲೀಸರು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯರನ್ನು ತೆರವುಗೊಳಿಸಲಾಗಿದೆ.
ಬೇವಿಂಜೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಸೋರಿಕೆಯನ್ನು ತಡೆಯಲು ಕ್ರಮ ತೆಗೆದುಕೊಂಡಿದ್ದಾರೆ. ಮಂಗಳೂರಿನಿಂದ ತೈಲ ಕಂಪೆನಿ ಅಧಿಕಾರಿ ಗಳು ಸ್ಥಳಕ್ಕೆ ತಲಪಿದ್ದು, ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.