ಮಂಗಳೂರು, ಸೆ. 10 (DaijiworldNews/MB) : ಬಿಜೆಪಿ ನಾಯಕರ ವಿರುದ್ಧದ 62 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ವಿಚಾರದಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು. ಹಾಗೆಯೇ ಈ ಪ್ರಕರಣಗಳ ವಿಚಾರಣೆ ನಡೆಯಬೇಕು ಎಂದು ಮಾಜಿ ಶಾಸಕ ಜೆ ಆರ್ ಲೋಬೊ ಒತ್ತಾಯಿಸಿದ್ದಾರೆ.


ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, "ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧದ 62 ಕ್ರಿಮಿನಲ್ ಪ್ರಕರಣಗಳನ್ನು ರಾಜ್ಯ ಸಚಿವ ಸಂಪುಟ ಹಿಂತೆಗೆದುಕೊಂಡಿದೆ. ಯಡಿಯೂರಪ್ಪ, ಕಾನೂನು ಸಚಿವ ಮಧುಸ್ವಾಮಿ, ಸಿ.ಟಿ.ರವಿ, ಸಂಸದ ಪ್ರತಾಪ್ ಸಿಂಹ, ಕೃಷಿ ಸಚಿವ ಬಿ.ಸಿ.ಪಾಟೀಲ್, ಶಾಸಕ ಹಾಲಪ್ಪ ಆಚಾರ್ ಹಾಗೂ ಅನೇಕ ನಾಯಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲಾಗುತ್ತದೆ" ಎಂದು ಹೇಳಿದರು.
ಸರ್ಕಾರ ಈ ನಿರ್ಧಾರ ಬಿಜೆಪಿ ಸರ್ಕಾರದ ಆಡಳಿತ ಯಾವ ರೀತಿ ಸೂಚಿಸುತ್ತದೆ. ಜನರಿಗೆ ಹಾಗೂ ಜನರ ಪ್ರತಿನಿಧಿಗಳಿಗೆ ಬೇರೆ ಬೇರೆ ಕಾನೂನನ್ನು ಬಿಜೆಪಿ ಹೊಂದಿದೆ. ವಜಾಗೊಳಿಸಿದ ಪ್ರಕರಣಗಳನ್ನು ಕಾನೂನು ಪ್ರಕಾರವಾಗಿರಬೇಕು. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಪ್ರಕರಣವನ್ನು ಹಿಂತೆಗೆದು ಕೊಳ್ಳುವುದಕ್ಕೆ ತಡೆಯಾಜ್ಞೆ ನೀಡಬೇಕು. ಹಾಗೆಯೇ ಈ ಪ್ರಕರಣಗಳ ವಿಚಾರಣೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
400 ಪ್ರಕರಣಗಳನ್ನು ಹಿಂತೆಗೆದುಕೊಂಡಿರುವ ಕಾಂಗ್ರೆಸ್-ಜೆಡಿ (ಎಸ್) ಸರ್ಕಾರದ ಬಗ್ಗೆ ಮಾಧ್ಯಮಗಳು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, "ನಾವು ಸಾಮಾನ್ಯ ಜನರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂತೆಗೆದುಕೊಂಡಿದ್ದೇವೆ ಹೊರತು ಜನರ ಪ್ರತಿನಿಧಿಗಳ ವಿರುದ್ಧ ದಾಖಲಾದ ಪ್ರಕರಣಗಳಲ್ಲ. ಸರ್ಕಾರವು ಜನರನ್ನು ರಕ್ಷಿಸುವ ಉದ್ದೇಶದಿಂದ ಈ ಪ್ರಕರಣಗಳನ್ನು ವಾಪಾಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.