ಉಡುಪಿ, ಸೆ.10(DaijiworldNews/HR): ಶ್ರೀ ಕೃಷ್ಣ ಮಠದಲ್ಲಿ, ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಶ್ರೀ ಕೃಷ್ಣ ದೇವರಿಗೆ "ತೊಟ್ಟಿಲಿನಲ್ಲಿ ಬಾಲಕೃಷ್ಣ" ಅಲಂಕಾರ ಮಾಡಿದರು. ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಲಕ್ಷ ತುಳಸಿ ಅರ್ಚನೆಯೊಂದಿಗೆ ಮಹಾಪೂಜೆಯನ್ನು ನೆರವೇರಿಸಿದರು.




ದೇವರ ವಿಶೇಷ ಪೂಜೆಗಾಗಿ ಲಡ್ಡಿಗೆಯನ್ನು ತಯಾರಿಸಲು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಚಾಲನೆ ನೀಡಿದರು.
ಈ ದಿನ ಪೂರ್ತಿ ಶ್ರೀಗಳು ಮತ್ತು ಭಕ್ತರೆಲ್ಲ ಉಪವಾಸ ಆಚರಿಸುತ್ತಾರೆ ಇಂದು ಮಧ್ಯ ರಾತ್ರಿ 12.16ಕ್ಕೆ ಅರ್ಘ್ಯ ಪ್ರದಾನ ನಡೆಯಲಿದೆ.
ನಾಳೆ ವಿಟ್ಲಾಪಿಂಡಿ ಕಾರ್ಯಕ್ರಮ ನಡೆಯಲಿದ್ದು ರಥಬೀದಿಗೆ ಸಂಜೆ 3 ಗಂಟೆ ಯಿಂದ ಆರು ಗಂಟೆಯವರೆಗೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಸಂಜೆ ಭಕ್ತರು ಬಂದು ಕನಕನ ಕಿಂಡಿಯಲ್ಲಿ ದರ್ಶನ ಪಡೆಯ ಬಹುದು ಎಂದು ಮಠದ ಮೂಲಗಳು ತಿಳಿಸಿವೆ.