ಮಂಗಳೂರು, ಸೆ. 10 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರದಂದು 350 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ಹದಿನಾರು ಸಾವಿರ ದಾಟಿದೆ.

ಇಂದು ಪತ್ತೆಯಾದ ಸೋಂಕಿತರ ಪೈಕಿ 100 ಮಂದಿಯಲ್ಲಿ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 119 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 27 ಮಂದಿಯಲ್ಲಿ ಸಾರಿ ಪ್ರಕರಣ ದೃಢಪಟ್ಟಿದೆ. 104 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ತಪಾಸಣೆಗೊಳಪಟ್ಟವರು - 114543
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು - 98431
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು -16112
ಗುರುವಾರದಂದು ದ.ಕ. ಜಿಲ್ಲೆಯಲ್ಲಿ ಪತ್ತೆಯಾದ ಪಾಸಿಟಿವ್ ಪ್ರಕರಣಗಳು - 350
ಗುರುವಾರದಂದು ದ.ಕ. ಜಿಲ್ಲೆಯಲ್ಲಿ ಗುಣಮುಖರಾದವರು - 170 ಮಂದಿ
ಇಂದು ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರು- 9 ಮಂದಿ
ದ.ಕ. ಜಿಲ್ಲೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿರುವವರು - 3273 ಮಂದಿ
ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಗುಣಮುಖರಾದವರು - 12412 ಮಂದಿ
ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಟ್ಟು ಬಲಿಯಾದವರು - 427 ಮಂದಿ