ಧರ್ಮಸ್ಥಳ, ಸೆ. 10 (DaijiworldNews/SM): ವಿವಾಹಿತ ವ್ಯಕ್ತಿಯೊಬ್ಬ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ವಿವಾಹಿತ ಸಲೀಂ ಪ್ರಕರಣದ ಆರೋಪಿಯಾಗಿದ್ದು, ಧರ್ಮಸ್ಥಳ ಠಾಣಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೀಡಿ ತೆಗೆಯುವ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಆರೋಪಿ ಯತ್ನ ನಡೆಸಿದ್ದಾನೆ. ಈ ವೇಳೆ ಯುವತಿ ಬೊಬ್ಬೆ ಹಾಕಿದ್ದು, ಸ್ಥಳೀಯರು ಸ್ಥಳಕ್ಕಾಗಮಿಸಿ ಆರೋಪಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.