ಕಾಪು, ಸೆ 11 (DaijiworldNews/PY): ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ನ ಮೇಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.



ಮಂಗಳೂರಿನಿಂದ ಉಡುಪಿಯತ್ತ ಸಾಗುತ್ತಿದ್ದ ಕಾರು ಹಳೇ ಮೆಸ್ಕಾಂ ಕಚೇರಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ನ ಮೇಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬ ನೆಲಕ್ಕುರುಳಿದೆ.
ಡಿಕ್ಕಿ ಹೊಡೆದ ಪರಿಣಾಮ ಕಾರೂ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾದ್ದು, ಗಾಯಗೊಂಡವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.