ಕಾಪು, ಸೆ 11 (DaijiworldNews/SM): ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ನಡೆದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿಯೊಬ್ಬಳು ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ಆಶ್ರಿತಾ ಸಲ್ಡಾನ್ಹಾ(24) ಮೃತ ಯುವತಿ. ಇನ್ನು ಕಾರು ಚಾಲಕ ನಿಹಾಲ್ ದಿನೇಶ್ ಶೆಟ್ಟಿ(24) ಎಂಬತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.





ಶುಕ್ರವಾರ ಮಧ್ಯಾಹ್ನದ ಸುಮಾರಿಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ನ ಮೇಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಘಟನೆಯ ಸಂದರ್ಭ ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದರು. ಮಂಗಳೂರಿನಿಂದ ಉಡುಪಿಯತ್ತ ಕಾರು ಸಾಗುತ್ತಿತ್ತು. ಈ ವೇಳೆ ಹಳೆ ಮೆಸ್ಕಾಂ ಕಚೇರಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ನ ಮೇಲಿನ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬ ನೆಲಕ್ಕುರುಳಿದೆ.
ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.