ಮಂಗಳೂರು, ಸೆ 11 (DaijiworldNews/SM): ಉಡುಪಿ ಜಿಲ್ಲೆಯಲ್ಲಿ ಮತ್ತೆ 168 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಕಾಸರಗೋಡಿನಲ್ಲಿ 102 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಉಡುಪಿಯಲ್ಲಿ 107 ಮಂದಿಯಲ್ಲಿ ಸಂಪರ್ಕದಿಂದ ಸೋಂಕು ದೃಢಪಟ್ಟಿದ್ದು, ಕಾಸರಗೋಡಿನಲ್ಲಿ 100 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಕಾಸರಗೋಡಿನಲ್ಲಿ ಮೂವರು ಆರೋಗ್ಯ ಸಿಬ್ಬಂದಿಗಳಿಗೆ ಸೋಂಕು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
168 ಮಂದಿಯಲ್ಲಿ ಪಾಸಿಟಿವ್ ದೃಢ
107 ಮಂದಿಯಲ್ಲಿ ಸಂಪರ್ಕದಿಂದ ಸೋಂಕು
49 ಮಂದಿಯಲ್ಲಿ ಐಎಲ್ ಐ ಕೇಸ್ ಪತ್ತೆ
ಒಬ್ಬರಲ್ಲಿ ಸಾರಿ, 11 ಮಂದಿಯ ಮೂಲ ಪತ್ತೆಯಾಗಿಲ್ಲ
ಶುಕ್ರವಾರ 1320 ಮಂದಿಯ ವರದಿ ನೆಗೆಟಿವ್
ಜಿಲ್ಲೆಯಲ್ಲಿ ಒಟ್ಟು 68795 ಮಂದಿಯ ವರದಿನೆಗೆಟಿವ್
13743-ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಸೋಂಕಿತರು
ಶುಕ್ರವಾರ 232 ಮಂದಿ ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಒಟ್ಟು 11784 ಮಂದಿ ಗುಣಮುಖ
1831 ಜಿಲ್ಲೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿರುವವರು
ಕಾಸರಗೋಡು ಜಿಲ್ಲೆಯ ಶುಕ್ರವಾರದ ಕೊರೋನಾ ವರದಿ:
ಜಿಲ್ಲೆಯಲ್ಲಿ ಶುಕ್ರವಾರ 102 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 100 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಮೂವರು ಆರೋಗ್ಯ ಸಿಬ್ಬಂದಿಯಲ್ಲೂ ಸೋಂಕು ಪತ್ತೆಯಾಗಿದೆ. ಹೊರ ರಾಜ್ಯದಿಂದ ಬಂದ ಇಬ್ಬರಿಗೆ ಸೋಂಕು ತಗುಲಿದೆ. 131 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 6,920 ಮಂದಿಗೆ ಸೋಂಕು ತಗುಲಿದೆ. 1970 ಮಂದಿ ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ. 7340 ಮಂದಿ ಸದ್ಯ ನಿಗಾದಲ್ಲಿದ್ದು, 1401 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.