ಮೇ, 08 : ಬಾದಾಮಿಯಲ್ಲಿರುವ ಹೊಸಪೇಟೆಯ ಶಾಸಕ ಆನಂದ್ ಸಿಂಗ್ ಒಡೆತನದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಮೇಲೆ ಸೋಮವಾರ ತಡರಾತ್ರಿ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದಾಳಿಯ ಬಳಿಕ 13 ಲಕ್ಷ ರೂಪಾಯಿ ಜಪ್ತಿ ಮಾಡಿರುವ ಬಗ್ಗೆ ವರದಿಯಾಗಿದೆ .ಕೃಷ್ಣಾ ಹೆರಿಟೇಜ್ ಕಾಂಗ್ರೆಸ್ ಮುಖಂಡರ ಕಾರ್ಯಕ್ಷೇತ್ರವಾಗಿದ್ದು ಎರಡು ದಿನಗಳ ಹಿಂದೆ ಆಗಮಿಸಿದ್ದ, ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲೇ ವಾಸ್ತವ್ಯ ಹೂಡಿದ್ದರು.ಅಲ್ಲದೇ ಐಟಿ ದಾಳಿ ನಡೆದಾಗ ರೆಸಾರ್ಟ್ನಲ್ಲಿ ಮಾಜಿ ಸಚಿವ ಸಿ.ಎಂ.ಇಬ್ರಾಹಿ ಅಲ್ಲೇ ತಂಗಿದ್ದರು ಎಂದು ತಿಳಿದು ಬಂದಿದೆ.
ಎರಡು ವಾಹನಗಳಲ್ಲಿ ಬಂದಿದ್ದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯ ಸಂದರ್ಭ ಅರೆಸೇನಾ ಪಡೆ ಹಾಗೂ ಸ್ಥಳೀಯ ಪೊಲೀಸರು ರೆಸಾರ್ಟ್ಗೆ ಭದ್ರತೆ ಒದಗಿಸಿದ್ದಾರೆ.