ಮೂಡುಬಿದಿರೆ, ಸೆ 13 (DaijiworldNews/SM): ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಪುತ್ತಿಗೆ ಗ್ರಾಮದ ಹಂಡೇಲುಸುತ್ತು ಎಂಬಲ್ಲಿ ನಡೆದ ಅಪಘಾತವೊಂದರಲ್ಲಿ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಟೆಂಪೋ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಕಾಂತಾವರ ನಿವಾಸಿ ಸಂತೋಷ್ ಶೆಟ್ಟಿ(34) ಮೃತಪಟ್ಟಿದ್ದಾರೆ. ಸಂತೋಷ್ ಶೆಟ್ಟಿ ತನ್ನ ಮಾವ ಜಯರಾಮ ಶೆಟ್ಟಿ ಎಂಬವರೊಂದಿಗೆ ಕಾಂತವಾರದಿಂದ ಮಿಜಾರಿನಲ್ಲಿರುವ ಸಂಬಂಧಿಕರ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಹಂಡೇಲು ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಟೆಂಪೋ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಸಂತೋಷ್ ಶೆಟ್ಟಿ ಅವರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸಹಸವಾರ ಜಯರಾಮ ಶೆಟ್ಟಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆಯ ಕುರಿತಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ