ಕಾರ್ಕಳ,ಸೆ.14(DaijiworldNews/HR): ಕಲ್ಯಾ ನೆಲ್ಲಿಗುಡ್ಡೆ ಎಂಬಲ್ಲಿ ಮೈ ಉರಿ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಆತ್ಮಹತ್ಯೆಗೈದ ಘಟನೆ ನಡೆದಿದೆ.

ಶೋಭಾ(60) ಎಂಬವರು ಆತ್ಮಹತ್ಯೆ ಮಾಡಿಕೊಂಡ ವೃದ್ದೆ. ಕಳೆದ ಕೆಲ ತಿಂಗಳುಗಳಿಂದ ಅವರಲ್ಲಿ ಮೈ ಉರಿ ರೋಗದ ಚಿಹ್ನೆ ಕಾಣಿಸಿಕೊಂಡಿದ್ದು, ಅಗತ್ಯ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಚಿಕಿತ್ಸೆ ಫಲಕಾರಿಯಾಗದೇ ಮಾನಸಿಕವಾಗಿ ನೊಂದು ಕೊಂಡಿದ್ದ ಅವರು ಸಪ್ಪೆಂಬರ್ 14ರ ಬೆಳಿಗ್ಗೆ ತನ್ನ ಮನೆಯ ಹಿಂಬದಿಯ ಮರಕ್ಕೆ ನೈಲಾನ್ ಹಗ್ಗ ಹಾಗೂ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸುದಾಖಲಾಗಿದೆ.