ಕಾಸರಗೋಡು, ಸೆ.14 (DaijiworldNews/SM): ಜಿಲ್ಲೆಯಲ್ಲಿ ಹಲವು ದಿನಗಳ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಸೋಮವಾರದಂದು ಜಿಲ್ಲೆಯಲ್ಲಿ 56 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಇಂದು ಪತ್ತೆಯಾದ ಸೋಂಕಿತರ ಪೈಕಿ 52 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ವಿದೇಶ ಹಾಗೂ ಹೊರ ರಾಜ್ಯಗಳಿಂದ ಬಂದ ತಲಾ ಇಬ್ಬರಿಗೆ ಸೋಂಕು ಪತ್ತೆಯಾಗಿದೆ.
ಈ ನಡುವೆ 135 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 7259 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.ಈ ಪೈಕಿ 1872 ಮಂದಿ ಪ್ರಸ್ತುತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 5288 ಮಂದಿ ನಿಗಾದಲ್ಲಿದ್ದು 1236 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.