ಮಂಗಳೂರು, ಸೆ 19 (DaijiworldNews/PY): ಡ್ರಗ್ಸ್ ಸಾಗಿಸುತ್ತಿದ್ದ ಡ್ಯಾನ್ಸರ್ ಕಿಶೋರ್ ಶೆಟ್ಟಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಸೆ.19ರ ಶನಿವಾರ ಬಂಧಿಸಿದ್ದಾರೆ.

ಇವರು ಡ್ರಗ್ಸ್ ಸಾಗಿಸುತ್ತಿದ್ದರು ಎಂದು ವರದಿಯಾಗಿದೆ.
ಕಿಶೋರ್ ಶೆಟ್ಟಿ ಖ್ಯಾತ ಡ್ಯಾನ್ಸರ್ ಆಗಿದ್ದು, ಇವರು ಹಿಂದಿಯ ಎಬಿಸಿಡಿ ಸಿನಿಮಾದಲ್ಲಿ ನಟಿಸಿದ್ದರು, ಅಲ್ಲದೇ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ನಲ್ಲೂ ಸ್ಪರ್ಧಿಯಾಗಿ ಭಾಗವಹಿಸಿದ್ದರು.
ಮಾದಕವಸ್ತುಗಳ ಮಾರಾಟ ಜಾಲವನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಕೈಗೊಂಡಿದ್ದು, ಇವರ ಬಂಧನವಾಗಿದೆ. ಸ್ಯಾಂಡಲ್ವುಡ್ನಲ್ಲಿ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಂದಿಯನ್ನು ಬಂಧಿಸಲಾಗಿದೆ.