ಉಡುಪಿ, ಸೆ. 19 (DaijiworldNews/MB) : ಜಿಲ್ಲೆಯಲ್ಲಿ 2020 ರ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಸೆಪ್ಟಂಬರ್ 21 ರಿಂದ 28 ರ ವರೆಗೆ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ಮುಗಿಯುವವರೆಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ನಿಷೇದಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಪರೀಕ್ಷೆಗಳು ಮುಕ್ತಾಯವಾಗುವವರೆಗೂ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ, ನಿಗಧಿಪಡಿಸಿದ ಎಲ್ಲಾ 10 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.