ಮಂಗಳೂರು, ಸೆ. 19 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶನಿವಾರದಂದು 432 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19754ಕ್ಕೆ ಏರಿಕೆಯಾಗಿದೆ.

ಶನಿವಾರದಂದು 98 ಮಂದಿಯಲ್ಲಿ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 187 ಮಂದಿಯಲ್ಲಿ ಐಎಲ್ ಐ ಕೇಸ್ ದೃಢಪಟ್ಟಿದ್ದು, 128 ಮಂದಿಯಲ್ಲಿ ಸಾರಿ ಪ್ರಕರಣ ದೃಢಪಟ್ಟಿದೆ. 119 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ. ಇಂದು 226 ಮಂದಿಯಲ್ಲಿ ಲಕ್ಷಣ ಸಹಿತ ಸೋಂಕು ದೃಢಪಟ್ಟಿದೆ. ಶನಿವಾರದ ಒಟ್ಟು ಸೋಂಕಿತರ ಪೈಕಿ 194 ಮಂದಿ ಮಂಗಳೂರು ತಾಲೂಕಿನವರಾಗಿದ್ದಾರೆ. 68 ಮಂದಿ ಬಂಟ್ವಾಳ ತಾಲೂಕಿನವರಾಗಿದ್ದಾರೆ. 71 ಮಂದಿ ಪುತ್ತೂರು ತಾಲೂಕಿನವರಾಗಿದ್ದಾರೆ. 13 ಸುಳ್ಯ, 47 ಬೆಳ್ತಂಗಡಿ ತಾಲೂಕಿನವರಾಗಿದ್ದಾರೆ. 39 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ.
ದ.ಕ. ಜಿಲ್ಲೆಯ ಶನಿವಾರದ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ 432 ಮಂದಿಯಲ್ಲಿ ಸೋಂಕು
ಜಿಲ್ಲೆಯಲ್ಲಿ ಮತ್ತೆ 404 ಮಂದಿ ಗುಣಮುಖ
ಶನಿವಾರದಂದು ಮತ್ತೆ ಐವರು ಸೋಂಕಿಗೆ ಬಲಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-19754
ಸದ್ಯ ಜಿಲ್ಲೆಯಲ್ಲಿ ಚಿಕಿತ್ಸೆಯಲ್ಲಿರುವವರು 4529 ಮಂದಿ
ಒಟ್ಟು ಗುಣಮುಖರಾಗಿ ಬಿಡುಗಡೆಯಾದವರು 14748 ಮಂದಿ
ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು 477 ಮಂದಿ
ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೆ ಒಳಪಟ್ಟವರು-135924 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ಪ್ರಕರಣಗಳು-116170