ಉಡುಪಿ,ಸೆ.20 (DaijiworldNews/HR): ಉಡುಪಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾದರೆ ರಕ್ಷಣಾ ಕಾರ್ಯಾಚರಣೆಗೆ ಮಿಲಿಟರಿ ಹೆಲಿಕಾಪ್ಟರ್ ಬಳಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ, ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಕೆಲವು ಗ್ರಾಮಗಳು ಜಲಾವೃತಗೊಂಡಿರುತ್ತವೆ. ಹಾಗೂ ರಸ್ತೆ ಸಂಪರ್ಕವು ಕಡಿತವಾಗಿರುವುದರ ಕುರಿತು ನನ್ನ ಗಮನಕ್ಕೆ ಜಿಲ್ಲಾಡಳಿತ ತಂದ ತಕ್ಷಣ ರಾಜ್ಯದ ಒಂದು ಎಸ್ ಡಿ ಆರ್ ಎಫ್ ತಂಡದ ಸುಮಾರು 250 ಸದಸ್ಯರನ್ನು ತಡರಾತ್ರಿಯೇ ಸ್ಥಳಕ್ಕೆ ಕಳುಹಿಸಿದೆ.
ಈಗಾಗಲೇ 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಹಾಗೂ ಎಸ್ ಡಿ ಆರ್ ಎಫ್ ತಂಡವೂ ಕೂಡ ಸ್ಥಳಕ್ಕೆ ತಲುಪಲಿದ್ದು. ಜಿಲ್ಲಾಡಳಿತಕ್ಕೆ ಎಲ್ಲಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಲಾಗಿದೆ. ಹಾಗೂ ಈ ಬಗ್ಗೆ ಕಂದಾಯ ಸಚಿವರಾದ ಆರ್ ಅಶೋಕ್ ಅವರ ಜೊತೆ ಮಾತನಾಡಿ ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನ್ನು ನೀಡಲು ಕೇಳಿಕೊಂಡಿರುತ್ತೇನೆ ಎಂಬುದಾಗಿ ಟ್ವೀಟ್ ಮಡಿದ್ದಾರೆ.