ಮಂಗಳೂರು, ಸೆ. 20 (DaijiworldNews/MB) : ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆ ಸೋಮವಾರ ನಡೆಯಬೇಕಾಗಿದ್ದ ಮಂಗಳೂರು ವಿಶ್ವವಿದ್ಯಾನಿಯಲದ ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಕೊರೊನಾ ವೈರಸ್ ಕಾರಣದಿಂದ ಮುಂದೂಡಲ್ಪಟ್ಟ ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಸೆಪ್ಟೆಂಬರ್ 16 ರ ಬುಧವಾರದಿಂದ ನಡೆಯುತ್ತಿದ್ದು ಈಗ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಗಾಳಿಯ ಕಾರಣದಿಂದಾಗಿ ಸೋಮವಾರ ನಡೆಯಲಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ವಿವಿ ಕುಲಪತಿ ಪ್ರೊ. ಪಿ. ಎಸ್. ಯಡಪಡಿತ್ತಾಯ ಅವರು, ಮಳೆಯ ಕಾರಣದಿಂದಾಗಿ ಸೋಮವಾರ ನಡೆಯಲಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು ಮುಂದಿನ ದಿನಗಳಲ್ಲಿ ಬದಲಿ ದಿನಾಂಕವನ್ನು ತಿಳಿಸಲಾಗುವುದು ಎಂದು ಹೇಳಿದ್ದಾರೆ.
ದಕ್ಷಿಣ, ಕನ್ನಡ ಉಡುಪಿ, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ.