ಮಂಗಳೂರು, ,ಸೆ.20 (DaijiworldNews/HR): ಸೆಪ್ಟೆಂಬರ್ 19 ರ ಮತ್ತು ಸೆಪ್ಟೆಂಬರ್ 20 ರ ಭಾನುವಾರ ರಾತ್ರಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಹಲವಾರು ಪ್ರದೇಶಗಳು ಮುಳುಗಡೆಯಾಗಿದೆ.










ಸೆಪ್ಟೆಂಬರ್ 20 ಮತ್ತು 21 ರಂದು ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ನಂದಿನಿ ಮತ್ತು ಶಾಂಭವಿ ನದಿಗಳು ತುಂಬಿಹರಿಯುತ್ತಿದ್ದು, ಕಿಲೆಂಜೂರು, ಪಂಜ, ಬಾಳ್ಕುಂಜೆ, ಅತ್ತೂರು ಮತ್ತು ಕಿನ್ನಿಗೋಳಿ ಬಳಿಯ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ.
ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದ್ದು, ನೂರಾರು ಎಕರೆ ಕೃಷಿ ಭೂಮಿ ನೀರಿನಲ್ಲಿ ಮುಳುಗಡೆಯಾಗಿ, ಭತ್ತದ ಗದ್ದೆಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ.
ಪ್ರವಾಹ ಪೀಡಿತ ಕುಟುಂಬಗಳನ್ನು ಈಗಾಗಲೇ ಸ್ಥಳಾಂತರಿಸಲು ಎನ್ಡಿಆರ್ಎಫ್ ಪಡೆಗಳನ್ನು ನಿಯೋಜಿಸಲಾಗಿದೆ.
ಇನ್ನು ಮುಲ್ಕಿ-ಬಾಳ್ಕುಂಜೆ ಮಾರ್ಗದಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿದ್ದು, ರಕ್ಷಣಾ ಕಾರ್ಯಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.
ಬಜ್ಪೆ ಬಳಿಯ ಅದ್ಯಪಾಡಿಯಲ್ಲಿ, ಭೂಕುಸಿತದ ನಂತರ ಪ್ರವೇಶ ರಸ್ತೆಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಈ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಸರಿಪಲ್ಲಾದಲ್ಲಿ ಮನೆ ಕುಸಿದು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಪ್ಪಿನಮೊಗರು, ಕುದ್ರೋಳಿ ಮತ್ತು ಇತರ ಪ್ರದೇಶಗಳಲ್ಲಿ ಜಲಾವೃತವಾಗಿದೆ. ಫಳ್ನೀರ್ನಲ್ಲಿ ಮರಗಳು ಬಿದ್ದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.