ಕುಂದಾಪುರ, ಸೆ. 21 (DaijiworldNews/MB) : ಇಲ್ಲಿನ ಸಮೀಪದ ನಾವುಂದದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದಿದ್ದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಯನ್ನು ನಾವುಂದ ನಿವಾಸಿ ಇಸ್ಮಾಯಿಲ್ (56) ಎಂದು ಗುರುತಿಸಲಾಗಿದೆ.
ಮಾರುಕಟ್ಟೆ ಕಡೆಯಿಂದ ಇಸ್ಮಾಯಿಲ್ ತನ್ನ ಮನೆಗೆ ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಸ್ವಿಫ್ಟ್ ಕಾರೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟ ಇಸ್ಮಾಯಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಸ್ಮಾಯಿಲ್ನ ಮೃತದೇಹವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಇಸ್ಮಾಯಿಲ್ನ ತಂದೆ ಶವವನ್ನು ನೋಡಿ ಪ್ರಜ್ಞೆ ತಪ್ಪಿ ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.