ಮಂಗಳೂರು, ಮೇ 11: ವಿಧಾನಸಭೆ ಚುನಾವಣಾ ಹಿನ್ನೆಲೆ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಚುನಾವಣಾ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ನಿನ್ನೆ ಸಂಜೆ 6 ಗಂಟೆಯಿಂದ ರಾಜ್ಯದಲ್ಲಿ ಮದ್ಯಮಾರಾಟ ಸ್ಥಗಿತಗೊಳಿಸಲಾಗಿದ್ದು, ಮಂಗಳೂರಿನ ಮದ್ಯದಂಗಡಿಗಳು ಬಂದ್ ಆಗಿವೆ. ಚುನಾವಣೆ ಹಿನ್ನೆಲೆಯಲ್ಲಿ 10 ರಿಂದ 13ರ ತನಕ ಮದ್ಯ ನಿಷೇಧಿಸಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶವನ್ನು ನೀಡಿದ್ದಾರೆ. ನಿನ್ನೆ ಸಂಜೆ ಎಲ್ಲಾ ಮದ್ಯದಂಗಡಿಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದು ಸೀಲ್ ಹಾಕಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ್ಲೆ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮೇ 13ರ ತನಕ ಸೆಕ್ಷನ್ ಮುಂದುವರೆಯಲಿದೆ. ವಿಧಾನಸಬಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಚುನಾವಣಾ ಆಯೋಗ ಎಲ್ಲ ರೀತಿಯಿಂದಲೂ ಮುನ್ನೇಚ್ಚರಿಕಾ ಕ್ರಮಗಳನ್ನು ಅನುಸರಿಸುತ್ತಿದೆ. ಇದೇ ಶನಿವಾರ ಮೇ 12ರಂದು ಮತದಾನ ನಡೆದರೆ, ಮೇ 15ರಂದು ಫಲಿತಾಂಶ ಹೊರಬರಲಿದೆ.