ಮಂಗಳೂರು, ಸೆ. 21 (DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಮವಾರದಂದು ಸೋಂಕಿತರ ಸಂಖ್ಯೆ ಸ್ವಲ್ಪ ಇಳಿಕೆಯಾಗಿದ್ದು, 233 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 404 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸೋಮವಾರದಂದು 78 ಮಂದಿಯಲ್ಲಿ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 105 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 9 ಮಂದಿಯಲ್ಲಿ ಸಾರಿ ಕೇಸ್ ದೃಢಪಟ್ಟಿದೆ. 41 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ. ಸೋಂಕಿತರ ಪೈಕಿ 122 ಮಂದಿ ಮಂಗಳೂರು ತಾಲೂಕಿನವರಾಗಿದ್ದಾರೆ.
ದ.ಕ. ಜಿಲ್ಲೆಯ ಸೋಮವಾರದ ಕೊರೋನಾ ವರದಿ:
ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆಗೆ ಒಳಪಟ್ಟವರು- 139050 ಮಂದಿ
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ನೆಗೆಟಿವ್ ವರದಿಗಳು-118683
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-20367
ದ.ಕ. ಜಿಲ್ಲೆಯ ಇಂದಿನ ಪಾಸಿಟಿವ್ ಕೇಸ್ ಗಳು- 233
ಜಿಲ್ಲೆಯಲ್ಲಿ ಇಂದು ಗುಣಮುಖರಾದವರು- 404
ಇಂದು ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರು-8 ಮಂದಿ
ಸದ್ಯ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 4371 ಮಂದಿ
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾಗಿ ಬಿಡುಗಡೆಯಾದವರು- 15505 ಮಂದಿ
ಜಿಲ್ಲೆಯಲ್ಲಿ ಒಟ್ಟು ಕೊರೋನಾ ಸಾವಿನ ಸಂಖ್ಯೆ 490ಕ್ಕೆ ಏರಿಕೆ