ಬಂಟ್ವಾಳ, ಮೇ 11: ಸಚಿವ ರೈ ಆಪ್ತ ಸಂಜೀವ್ ಪೂಜಾರಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಶ್ರೀಕಾಂತ್ ಶೆಟ್ಟಿ ಸೇರಿದಂತೆ ಹದಿನೈದು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಚಿವ ರಮಾನಾಥ್ ರೈ ಆಪ್ತ ಹಾಗೂ ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯರಾಗಿರುವ ಸಂಜೀವ ಪೂಜಾರಿಯ ಮನೆ ಮೇಲೆ ಗುರುವಾರ ತಡ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ರಾತ್ರೋ ರಾತ್ರಿ ಮನೆಗೆ ನುಗ್ಗಿದ ದುಷ್ಟರ್ಮಿಗಳು ರೈ ಆಪ್ತ ಸಂಜೀವ ಪೂಜಾರಿ ಮತ್ತು ಅವರ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.
ಈ ಘಟನೆ ಕುರಿತಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಕಾರ್ಯಚರಣೆ ನಡೆಸಿದ ಪೊಲೀಸರು ಬಿಜೆಪಿ ಮುಖಂಡ ಶ್ರೀಕಾಂತ್ ಶೆಟ್ಟಿ ಸೇರಿದಂತೆ ಹದಿನೈದು ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.