ಮಂಗಳೂರು, ಸೆ 22(Daijiworld News/PY): ಆಗಸ್ಟ್ 15 ರಂದು ಸುರತ್ಕಲ್ ಬಳಿಯ ಫ್ಲಾಟ್ಗೆ ನುಗ್ಗಿ ಕಳ್ಳತನ ಮಾಡಿದ್ದ ಅಂತರಾಜ್ಯ ಕಳ್ಳರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.





ಬಂಧಿತ ಆರೋಪಿಗಳನ್ನು ಸುರತ್ಕಲ್ನಲ್ಲಿ ಬಾರ್ ಮ್ಯಾನೇಜರ್ ಆಗಿದ್ದ ಎಕ್ಸ್ ಮಿಲಿಟರಿ ನವೀನ್, ವೈಟರ್ ಸಂತೋಷ್, ತಿರುವನಂತಪುರ ಮೂಲದ ರಘು, ಅಮೇಶ್ ಎಂದು ತಿಳಿದುಬಂದಿದೆ.ಬಂಧಿತ ಆರೋಪಿಗಳು ಆಗಸ್ಟ್ 15 ರಂದು ಸುರತ್ಕಲ್ ಬಳಿಯ ಫ್ಲಾಟಿಗೆ ನುಗ್ಗಿ ಕಳ್ಳತನ ಕೃತ್ಯ ಎಸಗಿದ್ದರು. ಕೇರಳ ಮೂಲದ ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.ಪೆಟ್ರೋಲ್ ಬಂಕ್ ಹೊಂದಿದ್ದ ವಿದ್ಯಾ ಪ್ರಭು ನಗದು ಇಟ್ಟು ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಫ್ಲಾಟ್ ಅನ್ನು ವಹಿವಾಟಿಗೆ ಬಳಸಿಕೊಳ್ಳುತ್ತಿದ್ದರು.ಈ ಬಗ್ಗೆ ಅರಿತಿದ್ದ ಫ್ಲಾಟ್ ಸೆಕ್ರೆಟರಿ ನವೀನ್ನಿಂದ ಕಳ್ಳತನ ಪ್ಲಾನ್ ಹಾಕಿದ್ದ ಎಂದು ಮಂಗಳೂರು ಕಮಿಷನರ್ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
ಘಟನೆಯ ಬಗ್ಗೆ ಫ್ಲಾಟ್ ಮಾಲಕಿ ವಿದ್ಯಾ ಪ್ರಭು ಪೊಲೀಸರಿಗೆ ದೂರು ನೀಡಿದ್ದು, 51 ಲಕ್ಷ ನಗದು, 224 ಗ್ರಾಂ ಚಿನ್ನ ಕಳವಾಗಿದೆ ಎಂದು ತಿಳಿಸಿದ್ದರು. ಆರೋಪಿಗಳಿಂದ 30.85 ಲಕ್ಷ ನಗದು, ಚಿನ್ನ, ಕಾರು ವಶ ಪಡಿಸಿಕೊಳ್ಳಲಾಗಿದೆ.
ಕಿಶೋರ್ ಶೆಟ್ಟಿಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ತನಿಖೆ ನಡೆಸಲು ಕಾಲಾವಕಾಶ ಇದೆ. ಕಿಶೋರ್ ಶೆಟ್ಟಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧ ಯುವತಿಯನ್ನು ಬಂಧಿಸಲಾಗಿದೆ. ಆಕೆಯನ್ನು ಬಂಧಿಸಿ ಡ್ರಗ್ಸ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಶೋರ್ ಶೆಟ್ಟಿಯನ್ನು ವಿಚಾರಣೆ ಮಾಡಲಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಮಾಹಿತಿ ನೀಡಿದ್ದಾರೆ.