ಪುತ್ತೂರು, ಸೆ. 23 (DaijiworldNews/MB) : ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ನೈತಾಡಿ -ಬೆದ್ರಾಳ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ ದ್ವಿ ಚಕ್ರ ವಾಹನ ನಿಲ್ಲಿಸಿ ಇಬ್ಬರು ವ್ಯಕ್ತಿಗಳು ಗಾಂಜಾ ಮಾರಾಟಕ್ಕೆ ಯತ್ನಿಸಿದ್ದು ಈ ಪೈಕಿ ಓರ್ವನನ್ನು ಪೊಲೀಸರು ಬೆನ್ನಟ್ಟಿ ಬಂಧಿಸಿದ್ದು ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

ಬಂಧಿತ ಆರೋಪಿ ನರಿಮೊಗರು ಗ್ರಾಮದ ಸಾಝಿಲ್ ಅಹಮ್ಮದ್ (24) ಆಗಿದ್ದು ಪರಾರಿಯಾದ ಆರೋಪಿ ಪುತ್ತೂರು ಕೆಮ್ಮಿಂಜೆ ಗ್ರಾಮದ ಮಹಮ್ಮದ್ ಅಶ್ರಫ್ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಯನ್ನು ಹಾಗೂ ಆತನ ಬಳಿಯಿದ್ದ ದ್ವಿಚಕ್ರ ವಾಹನನ್ನು ತಪಾಸಣೆ ನಡೆಸಿದಾಗ ಅಂದಾಜು ಸುಮಾರು ರೂ 3000 ಮೌಲ್ಯದ 166 ಗ್ರಾಂ ಗಾಂಜಾ ದೊರೆತಿದ್ದು ಗಾಂಜಾ, ಸುಮಾರು ರೂ 40,000 ಮೌಲ್ಯದ ದ್ವಿಚಕ್ರ ವಾಹನ ಮತ್ತು ಸುಮಾರು ರೂ 12,000 ಮೌಲ್ಯದ ಮೊಬೈಲ್ ಪೋನ್ನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.