ಕಾಸರಗೋಡು, ಸೆ. 23 (DaijiworldNews/SM): ಜಿಲ್ಲೆಯಲ್ಲಿ ಬುಧವಾರ 136 ಮಂದಿಗೆ ಕೊರೋನಾ ಸೋಂಕು ದ್ರಢಪಟ್ಟಿದ್ದು, 128 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ಮೂವರು ವಿದೇಶ ಹಾಗೂ 5 ಮಂದಿ ಹೊರರಾಜ್ಯಗಳಿಂದ ಮರಳಿದವರಲ್ಲಿ ಸೋಂಕು ದೃಢಪಟ್ಟಿದೆ.

ಮೂವರು ಆರೋಗ್ಯ ಕಾರ್ಯಕರ್ತರಿಗೂ ಸೋಂಕು ದೃಢಪಟ್ಟಿದೆ. ಈ ನಡುವೆ 310 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1773 ಮಂದಿ ಈಗ ಚಿಕಿತ್ಸೆಯಲ್ಲಿದ್ದಾರೆ. 4062 ಮಂದಿ ನಿಗಾದಲ್ಲಿದ್ದಾರೆ. 1113 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.
ಜಿಲ್ಲೆಯಲ್ಲಿ ನಿತ್ಯ ಸೋಂಕು ದೃಢಪಡುತ್ತಿರುವವರಿಗಿಂತೆ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಗುಣಮುಖರಾಗುತ್ತಿದ್ದಾರೆ.