ಮಂಗಳೂರು, ಸೆ 24(DaijiworldNews/PY): ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ, ನಟಿ ಅನುಶ್ರೀ ಅವರಿಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಡ್ರಗ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧಿಸಿರುವ ಮಂಗಳೂರಿನ ಸಿಸಿಬಿ ಪೊಲೀಸರು ಈ ಪ್ರಕರಣದ ಸಂಬಂಧ ಅನುಶ್ರೀ ಅವರಿಗೆ ವಾಟ್ಸಾಪ್ನಲ್ಲಿ ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.
ವಿಚಾರಣೆಯ ಸಂದರ್ಭ ಕಿಶೋರ್ ಅಮನ್ ಶೆಟ್ಟಿ ಅವರ ಆಪ್ತ ಸ್ನೇಹಿತ ತರುಣ್ ಅನುಶ್ರೀ ಅವರೊಂದಿಗೆ ಪಾರ್ಟಿ ಮಾಡಿದ್ದ ಎನ್ನುವ ವಿಚಾರವನ್ನು ತಿಳಿಸಿದ್ದು, ಅನುಶ್ರೀ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ.
ಆದರೆ ಇವೆಲ್ಲಾ ಆರೋಪಗಳನ್ನು ಅಲ್ಲಗಳೆದಿರುವ ಅನುಶ್ರೀ ಅವರು ಮಾಧ್ಯಮವೊಂದಕ್ಕೆ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟನೆ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.