ಉಡುಪಿ,ಸೆ. 24(DaijiworldNews/HR): 2020ನೇ ಸಾಲಿನ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಕೋಟ ಶಿವರಾಮ ಕಾರಂತರ ಜನ್ಮದಿನವಾದ ಅ.10ರಂದು ಕೋಟ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯಲಿದೆ.
ಇನ್ನು ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದಿಂದ 2005ರಿಂದ ಪ್ರಶಸ್ತಿ ನೀಡಲಾಗುತ್ತಿದೆ. ಕಳೆದ 15ವರ್ಷಗಳಿಂದ ರವಿ ಬೆಳಗೆರೆ, ವೀರಪ್ಪಮೊಯ್ಲಿ, ನಿವೃತ್ತ ನ್ಯಾಯಮೂರ್ತಿ ವೆಂಕಟಾಚಲಯ್ಯ, ಗಿರೀಶ್ ಕಾಸರವಳ್ಳಿ, ಸಾಲುಮರದ ತಿಮ್ಮಕ್ಕ, ನಟ ಪ್ರಕಾಶ್ ರೈ ಸಹಿತ 15 ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ.
ಈ ಬಾರಿ ಸಾಧಕರ ಸಾಲಿಗೆ ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರು ಸೇರಲಿದ್ದಾರೆ.