ಮಂಗಳೂರು,ಸೆ. 25(DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗೆ ಒಳಪಟ್ಟವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸಬೇಕೆಂದು ಸೆಪ್ಟೆಂಬರ್ 24, ರಂದು ಅಧಿಕೃತ ಆದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ಗೊಂದಲಕಿಡಾಗಿದ್ದರು. ಇದೀಗ ಇಂದು ಮತ್ತೊಂದು ಆದೇಶ ಪ್ರತಿಯನ್ನು ಜಿಲ್ಲಾ ಪಂಚಾಯತ್ ಹೊರಡಿಸಿ ಸ್ವ ಇಚ್ಚೆಯಿಂದ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದೆ.

ಈ ಕುರಿತು ಡೈಜಿವರ್ಲ್ಡ್ ಜೊತೆ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಆರ್ ಸೆಲ್ವಮಣಿ, ನಿನ್ನೆ ಬಂದ ಆದೇಶದಲ್ಲಿ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸಬೇಕೆಂದು ಮುದ್ರಣದ ಸಂದರ್ಭದ ಧೋಷದಿಂದ ಸಾರ್ವಜನಿಕರಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಪರೀಕ್ಷೆಗಳು ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿರುತ್ತವೆ ಮತ್ತು ಕಡ್ಡಾಯವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸ್ವಯಂಪ್ರೇರಿತ ಆಧಾರದ ಮೇಲೆ ಮಾತ್ರ ಪರೀಕ್ಷೆಗಳನ್ನು ನಡೆಸಬೇಕು ಎಂದು ಹೇಳುವ ಪರಿಷ್ಕೃತ ಸುತ್ತೋಲೆ ಹೊರಡಿಸಲಾಗಿದೆ. ಆದರೆ ಜಿಲ್ಲಾ ಆರೋಗ್ಯ ಅಧಿಕಾರಿ ಈ ರೀತಿಯ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುವುದರಿಂದ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸುತ್ತೋಲೆಯ ಪ್ರಕಾರ, ಪರೀಕ್ಷೆಗಳನ್ನು ನಡೆಸಲು ದಕ್ಷಿಣ ಕನ್ನಡ ಜಿಲ್ಲೆಯ ನಿರ್ದಿಷ್ಟ ವಲಯಗಳಲ್ಲಿ ಶಿಬಿರಗಳನ್ನು ಏರ್ಪಡಿಸಲಾಗುವುದು. ಪರೀಕ್ಷೆಗೆ ಒಳಗಾಗಲು, ಮಂಗಳೂರಿನಲ್ಲಿ 21 ಕೇಂದ್ರಗಳು, ಬಂಟ್ವಾಳದಲ್ಲಿ 19, ಬೆಳ್ತಂಗಡಿಯಲ್ಲಿ 13, ಪುತ್ತೂರಿನಲ್ಲಿ 10 ಮತ್ತು ಸುಳ್ಯದಲ್ಲಿ ಏಳು ಕೇಂದ್ರಗಳಿವೆ.
ಶಿಬಿರದ ಅವಧಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 5 ರವರೆಗೆ ಇರುತ್ತದೆ.