ಮಂಗಳೂರು, ಸೆ 25(DaijiworldNews/PY): ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿರುವ ಹಿನ್ನೆಲೆ ಅವರು ಸಿಸಿಬಿ ವಿಚಾರಣೆಗೆ ಇನ್ನೂ ಹಾಜರಾಗಿಲ್ಲ ಎಂದು ವರದಿಯಾಗಿದೆ.

ಅನುಶ್ರೀ ವಿಚಾರಣೆ ಹಿನ್ನೆಲೆ ಆರೋಪಿಗಳಾದ ಕಿಶೋರ್ ಶೆಟ್ಟಿ ಹಾಗೂ ಅಕೀಲ್ ನೌಶೀಲ್ ಅವರನ್ನು ಮಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪಾಂಡೇಶ್ವರದ ನಾರ್ಕೊಟಿಕ್ ಠಾಣೆಯಿಂದ ಆರೋಪಿಗಳನ್ನು ಶಿಫ್ಟ್ ಮಾಡಲಾಗಿತ್ತು.
ನಿರೂಪಕಿ ಅನುಶ್ರೀ ಸಿಸಿಬಿ ವಿಚಾರಣೆಗೆ ಹಾಜರಾಗದ ಹಿನ್ನಲೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.