ಉಡುಪಿ, ಸೆ. 26 (DaijiworldNews/MB) : ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಿತೇಶ್ ಸುವರ್ಣ ಅವರು ಆಯ್ಕೆಯಾಗಿದ್ದಾರೆ.


ಈ ಹಿಂದೆ ಮಿಥೇಶ್ ಅವರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದು ಇತರ ಅನೇಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇದೀಗ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಶಿಫಾರಸ್ಸಿನ ಮೇರೆಗೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ಚರಣ್ ಸಮ್ಮುಖದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಮಿತೇಶ್ ಸುವರ್ಣ ಉದ್ಯಾವರ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರೆಂದು ಘೋಷಿಸಿದರು. ಈ ಸಂದರ್ಭ ಅಧ್ಯಕ್ಷ ಗಿರಿಧರ್ ಉಪಸ್ಥಿತರಿದ್ದರು.