ಕಾಸರಗೋಡು, ಸೆ. 26 (DaijiworldNews/MB) : ಬಹುನಿರೀಕ್ಷಿತ ಮಂಜೇಶ್ವರ ಬಂದರು ಅ.1ರಂದು ಉದ್ಘಾಟನೆಗೊಳ್ಳಲಿದೆ.

ಅಂದು ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ವೀಡಿಯೋ ಕಾನ್ ಫೆರೆನ್ಸ್ ಮೂಲಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಂದರಿಗೆ ಚಾಲನೆ ನೀಡುವರು.
ಕೇಂದ್ರ ಮೀನುಗಾರಿಕೆ ಸಚಿವ ಗಿರಿರಾಜ್ ಸಿಂಗ್ ಮುಖ್ಯ ಅತಿಥಿಯಾಗಿರುವರು. ರಾಜ್ಯ ಮೀನುಗಾರಿಕೆ ಸಚಿವೆ ಮೆರ್ಸಿ ಕುಟ್ಟಿಯಮ್ಮ ಅಧ್ಯಕ್ಷತೆ ವಹಿಸುವರು. ಕಂದಾಯ ಸಚಿವ ಇ.ಚಂದ್ರಶೇಖರನ್, ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕಎಂ.ಸಿ.ಕಮರುದ್ದೀನ್ ಮೊದಲಾದವರು ಉಪಸ್ಥಿತರಿರುವರು.