ಮಂಗಳೂರು, ಮೇ 14: ರಾಜ್ಯ ವಿಧಾನಸಭಾ ಚುನಾವ ಮತಎಣಿಕೆ ಕಾರ್ಯ ಮೇ 15 ರ ಮಂಗಳವಾರ ನಡೆಯಲಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯವನ್ನು ಜಿಲ್ಲೆಯ ಮತದಾರ ಪ್ರಭುಗಳು ಶನಿವಾರ ನಿರ್ಧರಿಸಿದ್ದು, ಇದರ ತೀರ್ಪು ನಾಳೆ ಹೊರಬೀಳಲಿದೆ.
ಮತಎಣಿಕೆ ಕಾರ್ಯವು ಬೋಂದೆಲ್ ನಲ್ಲಿ ನಡೆಯಲಿದ್ದು ಮುಂಜಾಗೃತ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಮತ ಎಣಿಕೆ ಕಾರ್ಯ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ, ಸಾರ್ವಜನಿಕ ಹಿತದೃಷ್ಠಿಯಿಂದ ಇಂದು ಮಧ್ಯರಾತ್ರಿಯಿಂದ 15 ನೇ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಲಾಗಿದೆ. ಮತ ಎಣಿಕಾ ಕೇಂದ್ರದ ಆವರಣದ ಸುತ್ತ ಅಥವಾ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು , ವಿಜಯೋತ್ಸವದ ವೇಳೆ ಪಟಾಕಿ ಹೊಡೆಯುವುದನ್ನು ನಿಷೇಧಿಸಲಾಗಿದೆ.