ಕಾಸರಗೋಡು, ಸೆ. 28 (DaijiworldNews/SM): ಜಿಲ್ಲೆಯಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದೆ.

ಕಳೆದ 15 ದಿನಗಳಿಂದ ಸೋಂಕಿತರ ಸಂಖ್ಯೆ ನಿರಂತರವಾಗಿ ಏರಿಕೆಯಾಗಿದ್ದು, ಇದೀಗ ದಾಖಲೆ ಪ್ರಮಾಣದ ಏರಿಕೆಯಾಗಿದೆ. ಶೇಕಡಾ 98ರಷ್ಟು ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. ಇಂದು ಕೂಡಾ 122 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ಸಾವಿನ ಸಂಖ್ಯೆ 80 ದಾಟಿದೆ.
ಇಂದಿನ ಸೋಂಕಿತರ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹತ್ತು ಸಾವಿರ ದಾಟಿದೆ. ಒಟ್ಟು 10,013 ಮಂದಿಗೆ ಸೋಂಕು ದ್ರಢಪಟ್ಟಿದೆ. ಈ ಪೈಕಿ 2277 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ. 7657 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟವರ ಸಂಖ್ಯೆ 79ಕ್ಕೇರಿದೆ. ಸೋಂಕಿತರಲ್ಲಿ 701 ಮಂದಿ ವಿದೇಶದಿಂದ ಹಾಗೂ 535 ಮಂದಿ ಹೊರರಾಜ್ಯಗಳಿಂದ ಬಂದವರಾಗಿದ್ದಾರೆ.
ಸೋಮವಾರ ಸೋಂಕಿತರಲ್ಲಿ 114 ಮಂದಿಗೆ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. ಆರು ಮಂದಿ ಹೊರರಾಜ್ಯ, ಇಬ್ಬರು ವಿದೇಶಗಳಿಂದ ಬಂದವರಾಗಿದ್ದಾರೆ. 91 ಮಂದಿ ಗುಣಮುಖರಾಗಿದ್ದಾರೆ. 4678 ಮಂದಿ ನಿಗಾದಲ್ಲಿದ್ದಾರೆ.