ಮಂಗಳೂರು, ಸೆ. 28 (DaijiworldNews/SM): ನಗರದಲ್ಲಿ ಡ್ರಗ್ಸ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೆಡ್ಲರ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ಯಾನ್ಸರ್ ಕಿಶೋರ್ ಅಮನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಮುಂದುವರೆಸಿದ ಸಿಸಿಬಿ ಪೊಲೀಸರು ಇದೀಗ ಪ್ರಮುಖ ಪೆಡ್ಲರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮುಂಬೈಯಲ್ಲಿ ನೆಲೆಸಿದ್ದ ಪೆಡ್ಲರ್ ಶಾನ್ ಎಂಬಾತನನ್ನು ಮಂಗಳೂರು ಸಿಸಿಬಿ ಪೋಲಿಸರು ಸದ್ಯ ವಶಕ್ಕೆ ಪಡೆದುಕೊಂಡಿದ್ದಾರೆ. ಶಾನ್, ಮೂಲತಃ ಮಂಗಳೂರಿನ ಬಂದರು ನಿವಾಸಿ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಶಾನ್, ತರುಣ್ ರಾಜ್ ನ ಡ್ರಗ್ಸ್ ಪಾರ್ಟಿಗಳಿಗೆ ಡ್ರಗ್ಸ್ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಇತ್ತೀಚಿಗೆ ಬಂಧನವಾಗಿದ್ದ ಶಾಕೀರ್ ಮೂಲಕ ಡ್ರಗ್ಸ್ ಪಾರ್ಟಿಗಳಿಗೆ ಶಾನ್ ನಿಂದ ಡ್ರಗ್ಸ್ ಪೂರೈಕೆಯಾಗುತ್ತಿತ್ತು ಎನ್ನುವ ಆರೋಪ ಇದೆ. ಮುಂಬೈ, ಗೋವಾದಿಂದ ಡ್ರಗ್ಸ್ ತರಿಸಿಕೊಡುತ್ತಿದ್ದ ಎಂದು ತಿಳಿದುಬಂದಿದೆ.
ಮಂಗಳೂರು ಸಿಸಿಬಿ ಪೋಲಿಸರು ತನಿಖೆ ಮುಂದುವರೆಸಿದ್ದಾರೆ.