ಕಾರ್ಕಳ, ಸೆ 29(DaijiworldNews/PY): ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ ಹಾಗೂ ಸಂಪುಟ ಮಂತ್ರಿ ಮಂಡಲದಲ್ಲಿ ಯಾರು ಯಾರು ಇರುತ್ತಾರೆ ಎನ್ನುವ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕಾರ್ಕಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆಯ ವಿಚಾರವಾಗಿ ನಾನು ಏನೂ ಹೇಳುವುದಿಲ್ಲ. ಸಿಎಂ ಬಿಎಸ್ವೈ ಅವರು ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ವಿಚಾರ ದೂರದ ಮಾತು ಎಂದು ತಿಳಿಸಿದರು.
ರಾಜ್ಯದ ವಿಧಾನಮಂಡಲ ಅಧಿವೇಶನ ಮುಕ್ತಾಯವಾಗಿದೆ. ಸಚಿವ ಸಂಪುಟ ವಿಸ್ತರಣೆಯ ವಿಚಾರದ ಬಗ್ಗೆ ಮತ್ತೆ ಮಾತನಾಡುತ್ತಿದ್ದಾರೆ. ಈ ನಡುವೆ ಇನ್ನು ಮೂರು ದಿನಗಳಲ್ಲಿ ಸಿಎಂ ಬಿಎಸ್ವೈ ಅವರು ದೆಹಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ ಎಂದರು.