ಮಂಗಳೂರು, ಸೆ 29(DaijiworldNews/PY): ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಸಿಲುಕಿರುವ ಕಾರಣ ರಾಜ್ಯಪಾಲರು ಮಧ್ಯಪ್ರವೇಶಿಸಬೇಕು. ಮುಖ್ಯಮಂತ್ರಿ ರಾಜೀನಾಮೆ ಪಡೆಯಬೇಕು ಹಾಗೂ ನೇರ ಚುನಾವಣೆಗೆ ಕರೆ ನೀಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಅವರು ಸಿಎಂ ಬಿಎಸ್ವೈ ಅವರಿಗೆ ಒತ್ತಾಯಿಸಿದರು.


ಸೆ.29ರ ಮಂಗಳವಾರ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ವಿರೋಧ ಪಕ್ಷದವರಾಗಿ, ಸರಿಯಾದ ವ್ಯವಸ್ಥೆ ಮಾಡುವಂತೆ ನಾವು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೆವು. ವಿಧಾನಸಭಾ ಅಧಿವೇಶನಗಳಲ್ಲಿಯೂ ಸಿದ್ದರಾಮಯ್ಯ ಅವರು, ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಮಾಡಿದ ವೈಫಲ್ಯಗಳ ಬಗ್ಗೆ ವಿವರವಾದ ಮಾಹಿತಿ ನೀಡಿದ್ದಾರೆ ಎಂದರು.
ಕೊರೊನಾ ಹೆಸರಿನಲ್ಲಿ ಮಾಡಿದ ಭ್ರಷ್ಟಾಚಾರ ಆರೋಪವನ್ನು ಬಿಜೆಪಿ ವಿಧಾನಸಭೆಯಲ್ಲಿ ನಿರಾಕರಿಸಿದೆ. ಸರಿಯಾದ ವ್ಯವಸ್ಥೆಗಳಿಲ್ಲ. ಬೆಡ್ಗಳು, ವೆಂಟಿಲೇಟರ್ಗಳು, ಸ್ಯಾನಿಟೈಸರ್ ಹಾಗೂ ಪಿಪಿಇ ಕಿಟ್ಗಳ ಕೊರತೆ ಇದೆ. ವೆಂಟಿಕೇಟರ್ಗಳನ್ನು ಒದಗಿಸುವಂತೆ ನಾವು ಮುಖ್ಯಮಂತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನಾವು ಒತ್ತಾಯಿಸುತ್ತೇವೆ. ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಯಾವುದೇ ಮಾರ್ಗವಿಲ್ಲ. ಅವರು ಕೇವಲ ಹಣ ಗಳಿಸುವತ್ತ ಮಾತ್ರ ಗಮನಹರಿಸಿದ್ದು, ಭ್ರಷ್ಟಾಚಾರಕ್ಕ ಸಿಲುಕಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಹಾಗೂ ಅವರ ಕುಟುಂಬ ವಸತಿ ಯೋಜನೆಗಳಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ. ಬಿಡಿಎ ಪ್ರಕರಣವೊಂದರಲ್ಲಿ 24 ಕೋಟಿ.ರೂ.ಗಳ ಹಗರಣ ನಡೆದಿರುವ ಬಗ್ಗೆ ಸಾಕ್ಷ್ಯ ಸಹಿತ ದಾಖಲೆ ಇದೆ. ಆರ್ಟಿಜಿಎಸ್ ಮೂಲಕ ಬ್ಯಾಂಕ್ ಖಾತೆಗೆ 7.4 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಲಾಗಿದ್ದು, ಯಡಿಯೂರಪ್ಪ ನಡೆಸುತ್ತಿರುವ ಸರ್ಕಾರವು ಅತಿರೇಕದ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಾಬೀತಾಗಿದೆ ಎಂದು ತಿಳಿಸಿದರು.
ವಿಜಯೇಂದ್ರ ಅವರು ಸೂಪರ್ ಸಿಎಂ ಆಗಿದ್ದು, ಅವರ ಅನುಮತಿ ಇಲ್ಲದೇ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಸಂಪೂರ್ಣ ದಾಖಲೆಗಳು ಮತ್ತು ಪುರಾವೆಗಳಿವೆ. ಈಗ ಯಡಿಯೂರಪ್ಪ ವಿರುದ್ಧ ಬಿಜೆಪಿಯಿಂದ ಯಾವ ಕ್ರಮ ಕೈಗೊಳ್ಳಲಾಗುವುದು? ಪಕ್ಷಕ್ಕೆ ಧೈರ್ಯವಿಲ್ಲ. ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಪ್ರತಿಪಕ್ಷಗಳು ಒತ್ತಾಯಿಸಿದಾಗಲೆಲ್ಲಾ ನಾವು ತನಿಖೆಗೆ ಆದೇಶಿಸಿದ್ದೇವೆ ಎಂದು ಅವರು ಹೇಳಿದರು.