ಮಂಗಳೂರು, ಸೆ 29(DaijiworldNews/PY): ಕಾಮಿಡಿ ಮಾಡುವ ವ್ಯಕ್ತಿ ಯಾರು ಮತ್ತು ಕಾಮಿಡಿಯಾದ ಪಕ್ಷ ಯಾವುದು ಎಂದು ದೇಶದ ಜನತೆಗೆ ಸರಿಯಾಗಿ ತಿಳಿದಿದೆ! ಜೈಲಿಗೆ ಹೋಗಿ ಬಂದವರೆಲ್ಲಾ ಬಿಜೆಪಿಯಲ್ಲೇ ಇರುವುದು ಎಂದಾದರೇ ತಿಹಾರ್ ಜೈಲು ಕಾಂಗ್ರೆಸ್ಗೆ ಜೈಲಿನ ಹಾಗೆ ಕಾಣಲಿಲ್ಲವೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಮಿಡಿ ಮಾಡುವ ವ್ಯಕ್ತಿ ಯಾರು ಮತ್ತು ಕಾಮಿಡಿಯಾದ ಪಕ್ಷ ಯಾವುದು ಎಂದು ದೇಶದ ಜನತೆಗೆ ಸರಿಯಾಗಿ ತಿಳಿದಿದೆ! ಜೈಲಿಗೆ ಹೋಗಿ ಬಂದವರೆಲ್ಲಾ ಬಿಜೆಪಿಯಲ್ಲೇ ಇರುವುದು ಎಂದಾದರೇ ತಿಹಾರ್ ಜೈಲು ಕಾಂಗ್ರೆಸ್ಗೆ ಜೈಲಿನ ಹಾಗೆ ಕಾಣಲಿಲ್ಲವೇ? ಜಾಮೀನಿನ ಮೇಲೆ ಹೊರಗೆ ಇರುವುದೇ ಪಕ್ಷದ ಅಧ್ಯಕ್ಷರಾಗಲು ಇರುವ ಮಾನದಂಡವೇ.? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲ್ ಅವರೇ, ಅಕ್ರಮ ಡಿನೋಟಿಫಿಕೇಷನ್'ನಂತಹ ಭೂ ಹಗರಣದವರು, ಅಕ್ರಮ ಗಣಿ ಹಗರಣದವರು, ಜೈಲಿಗೆ ಹೋಗಿ ಬಂದವರು ನಿಮ್ಮಲ್ಲೇ ಇದ್ದಾರೆ. "ಒಂದು ಡಾಲರ್'ಗೆ 15 ರೂಪಾಯಿ" ಮಾಡುತ್ತೇವೆಂದು ಅಮಾಯಕರ ದಾರಿ ತಪ್ಪಿಸುವ ಕಲೆ ನಿಮಗಿಂತ ಚೆನ್ನಾಗಿ ಇನ್ಯಾರಿಗೆ ತಿಳಿದಿರಲು ಸಾಧ್ಯ ಹೇಳಿ !!? ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.
ಕಾಮಿಡಿ ಮಾಡುವ ವ್ಯಕ್ತಿ ಯಾರು ಮತ್ತು ಕಾಮಿಡಿಯಾದ ಪಕ್ಷ ಯಾವುದು ಎಂದು ದೇಶದ ಜನತೆಗೆ ಸರಿಯಾಗಿ ತಿಳಿದಿದೆ!😂
ಜೈಲಿಗೆ ಹೋಗಿ ಬಂದವರೆಲ್ಲಾ ಬಿಜೆಪಿಯಲ್ಲೇ ಇರುವುದು ಎಂದಾದರೇ ತಿಹಾರ್ ಜೈಲು @INCKarnataka ಕ್ಕೆ ಜೈಲಿನ ಹಾಗೆ ಕಾಣಲಿಲ್ಲವೇ?
ಜಾಮೀನಿನ ಮೇಲೆ ಹೊರಗೆ ಇರುವುದೇ ಪಕ್ಷದ ಅಧ್ಯಕ್ಷರಾಗಲು ಇರುವ ಮಾನದಂಡವೇ.?🤔
Poor #CONgress !! https://t.co/ItBl4bfI8w
— Nalinkumar Kateel (@nalinkateel) September 29, 2020