ಉಡುಪಿ, ಸೆ. 28 (DaijiworldNews/SM): ಕಳೆದ ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಯಾಡಿ ಪೀಟರ್ ಡಿಸೋಜ ಎಂಬುವವರ ಮನೆ ಹಾನಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ಕೆ ರಘುಪತಿ ಭಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ಬಳಿಕ ಶಾಸಕರು ಶೀಘ್ರದಲ್ಲಿ ಗರಿಷ್ಠ ಮೊತ್ತದ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಉಪ್ಪೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪದ್ಮನಾಭ, ನಾರಾಯಣ್ ಶೆಟ್ಟಿ, ಪ್ರವೀಣ್ ಶೆಟ್ಟಿ ಮತ್ತು ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ, ಕಂದಾಯ ನಿರೀಕ್ಷಕ ಲಕ್ಷ್ಮೀನಾರಾಯಣ ಭಟ್, ಗ್ರಾಮ ಲೆಕ್ಕಿಗ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.