ಮಂಗಳೂರು, ಸೆ 30(DaijiworldNews/PY): ನಗರದ ಖ್ಯಾತ ಶಸ್ತ್ರಚಿಕಿತ್ಸಕ ಡಾ.ದೇವದಾಸ್ ಹೆಗ್ಡೆ (79) ಅವರು ಸೆ.29ರ ಮಂಗಳವಾರದಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.

ಡಾ.ಹೆಗ್ಡೆ ಅವರು ಕಸ್ತೂರ್ಬಾ ಮೆಡಿಕಲ್ ಕಾಲೇಜು ಆಸ್ಪತ್ರೆಯ ನಿವೃತ್ತ ಪ್ರಾಧ್ಯಾಪಕರಾಗಿದ್ದರು. ಎ.ಜೆ ಮೆಡಿಕಲ್ ಕಾಲೇಜಿನ ಡೀನ್ ಹಾಗೂ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ನಿವೃತ್ತ ಮುಖ್ಯ ಶಸ್ತ್ರಚಿಕಿತ್ಸಕರಾಗಿದ್ದರು.
ಡಾ.ಹೆಗ್ಡೆ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.