ಪುತ್ತೂರು, ಮೇ 15: ಕರಾವಳಿ ಭಾಗದ ಪ್ರಮುಖ ರಾಜಕೀಯ ನಾಯಕರ ಭವಿಷ್ಯ ನಿರ್ಧರಿಸುವ ಚುನಾವಣಾ ಮತ ಎಣಿಕೆ ಆರಂಭವಾಗಿದೆ.
ಮಂಗಳೂರಿನ ಬೊಂದೇಲ್ ನಲ್ಲಿರುವ ಮಹಾತ್ಮ ಗಾಂಧಿ ಪಿಯು ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಿದ್ದು, ಕಾಲೇಜಿನ ಸುತ್ತಲೂ ಬಿಗಿ ಭದ್ರತೆ ನಿಯೋಜಿಸಲಾಗಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಕುಂತಲಾ ಶೆಟ್ಟಿಗಿಂತ ಸುಮಾರು 1102 ಮತ ಪಡೆದುಕೊಂಡು ಪ್ರಾಥಮಿಕ ಮುನ್ನಡೆ ಸಾಧಿಸಿಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು 5109 ಮತ ಪಡೆದುಕೊಂಡರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಕುಂತಲಾ ಶೆಟ್ಟಿ 4007 ಮತ ಪಡೆದುಕೊಂಡಿದ್ದಾರೆ.