ಉಡುಪಿ, ಸೆ 30(DaijiworldNews/PY): ಅಕ್ಟೋಬರ್ 4 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಿಗದಿಯಾಗಿದ್ದು, ಜಿಲ್ಲೆಯಲ್ಲಿ ನಿಗದಿಪಡಿಸಿರುವ 7 ಪರೀಕ್ಷಾ ಕೇಂದ್ರಗಳ ಸುತ್ತಲೂ ಸೆಕ್ಷನ್ 144(1) ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ದುಷ್ಟ ಶಕ್ತಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಈ ನಿಷೇಧಾಜ್ಞೆ ಆದೇಶವು ಪರೀಕ್ಷಾ ದಿನದಂದು ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.